ಅರಿತೆವೇನು ನಾವು ನಮ್ಮ ಅಂತರಾಳವ
ಕಡಲ ಮೇಲೆ ಸಾವಿರಯು ಮೈಲಿ ಸಾಗಿಯೂ
ನೀರಿನಾಳ ತಿಳಿಯಿತೇನು ಹಾಯಿ ದೋಣಿಗೆ
ಸದಾ ಕಾಲ ತಬ್ಬುವಂತೆ ಮೇಲೆ ಬಾಗಿಯೂ
ಮಣ್ಣ ಮುತ್ತು ದೊರಕಿತೆನು ನೀಲಿ ಬಾನಿಗೆ
ಸಾವಿರಾರು ಮುಖದ ಚೆಲುವ ಹಿಡಿದು ತೋರಿಯೂ
ಒಂದಾದರೂ ಉಳಿಯಿತೇ ಕನ್ನಡಿಯ ಪಾಲಿಗೆ
- ರಚನೆ: ಡಾ|| ಏನ್ ಎಸ್ ಲಕ್ಷ್ಮಿ ನಾರಾಯಣ ಭಟ್ಟ
No comments:
Post a Comment