ನಾ ತಾಳಲಾರೆ, ಈ ವಿರಹಾ ಕೃಷ್ಣಾ . . .
ಕಮಲವಿಲ್ಲದ ಕೆರೆ ನನ್ನ ಬಾಳು
ಚಂದ್ರ ಇಲ್ಲದ ರಾತ್ರಿ ಬೀಳು
ನೀ ಸಿಗದೇ ಉರಿ ಉರಿ ಕಳೆದೆ ಇರುಳ
ಮಾತೆಲ್ಲ ಬಿಗಿದಿದೆ ದುಃಖ ಕೊರಳ
ಅಣ್ಣ ಸೇರದು ನಿದ್ದೆ ಬಂದುದೆಂದು
ಕುದಿವೆ ಒಂದೇ ಸಮ ಕೃಷ್ಣಾ ಎಂದು
ಯಾರು ಅರಿವರೋ ಹೇಳು ನನ್ನ ನೋವ
ತಲ್ಲಣಿಸಿ ಕೂಗುತಿದೆ ದಾಸಿ ಜೀವ
ಒಳಗಿರುವ ಗಿರಿಧರನೇ ಹೊರಗೆ ಬಾರೋ
ಕಣ್ಣೆದುರು ನಿಂತು ಆ ರೂಪ ತೋರೋ
ಜನುಮ ಜನುಮದ ರಾಗ ನನ್ನ ಪ್ರೀತಿ
ನಿನ್ನೊಳಗೆ ಹರಿವುದೇ ಅದರ ರೀತಿ
- ರಚನೆ : - ಡಾ. ಎನ್. ಎಸ್. ಲಕ್ಷಿ ನಾರಾಯಣ ಭಟ್ಟ
No comments:
Post a Comment